ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನ ಆಧಾರಿತ ‘ವಿರಾಗಿ’ ಚಲನಚಿತ್ರದ ಧ್ವನಿ ಸುರಳಿಯ ಬಿಡುಗಡೆ
ಬೆಳಗಾವಿಯ ಕೆ ಎಲ್ ಇ ಲಿಂಗರಾಜ ಕಾಲೇಜಿನ ಮೈದಾನದಲ್ಲಿ ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನ ಆಧಾರಿತ ‘ವಿರಾಗಿ’ ಚಲನಚಿತ್ರದ ಧ್ವನಿ ಸುರಳಿಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು. ಬೆಳಗಾವಿಯ ಕಾರಂಜಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಹೊಸೂರ ಮಠದ ಶ್ರೀ ಗಂಗಾಧರ ಮಹಾಸ್ವಾಮಿಗಳು, ಹಾಗೂ ಮುನವಳ್ಳಿಯ ಶ್ರೀ ಮುರುಗೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ ಕವಟಗಿಮಠ ಹಾಗೂ ಗಣ್ಯರು ಉಪಸ್ಥಿತರಿದ್ದರು.