10Apr
4th April 2021
“ಬೆಳಗಾವಿ ಅಭಿವೃದ್ಧಿಗೆ ಬಿಜೆಪಿಯೇ ದಾರಿ”. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ನಡೆದ ಪ್ರಚಾರರ್ಥ ಕಾರ್ಯಕ್ರಮ ಲೋಕಸಭಾ ಉಪಚುನಾವಣೆಯ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಅವರ ಪರ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಲೋಕಸಭಾ ಉಪಚುನಾವಣೆಯ ಅಭ್ಯರ್ಥಿಯಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಅವರು, ಮಾನ್ಯ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು, ಮಾನ್ಯ ಸಚಿವರಾದ ಶ್ರೀ ಉಮೇಶ ಕತ್ತಿ ಅವರು, ಮಾನ್ಯ ಸಚಿವರಾದ ಶ್ರೀ ಭೈರತಿ ಬಸವರಾಜ ಅವರು, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ ಅವರು, ಸಂಸದರಾದ ಶ್ರೀ ಅಣ್ಣಾಸಾಹೇಬ್ ಜೊಲ್ಲೆ ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಈ ಚುನಾವಣೆ ಉಸ್ತುವಾರಿಯಾದ ಶ್ರೀ ಮಹೇಶ ಟೆಂಗಿನಕಾಯಿ ಅವರು, ಶಾಸಕರಾದ ಶ್ರೀ ಅಭಯ ಪಾಟೀಲ ಅವರು, ಶಾಸಕರಾದ ಶ್ರೀ ಅನೀಲ ಬೆನಕೆ ಅವರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ ಪಾಟೀಲ ಅವರು, ರಾಜ್ಯ ವಕ್ತಾರರಾದ ಶ್ರೀ ಎಂ. ಬಿ. ಜಿರಳಿ ಅವರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.